(ಅರಳುತ್ತಲೇ ಕಂಪನ್ನು ಸೂಸುತ್ತಿರುವ ಕನ್ನಡದ ಸುಮಧುರ ಇ-ಪತ್ರಿಕೆ "ಪಂಜು"ವಿನಲ್ಲಿ ಪ್ರಕಟಣೆಗೊಂಡಿದೆ.
ಸಹೋದರ ನಟರಾಜು ಹಾಗೂ "ಪಂಜು" ತಂಡಕ್ಕೆ ಧನ್ಯವಾದಗಳು!)
"ಅಪಾರ ಕೀರ್ತಿ ಗಳಿಸಿ ಮೆರೆವ ಭವ್ಯ ನಾಡಿದು ಕರ್ನಾಟವಿದುವೆ ನೃತ್ಯ ಶಿಲ್ಪ ಕಲೆಯ ಬೀಡಿದು...ಅಪಾರ ಕೀರ್ತಿಯೇ"
ಕನ್ನಡ ಚಿತ್ರರಂಗದ ಭೀಷ್ಮ ಎಂದೇ ಹೆಸರಾಗಿದ್ದ ಶ್ರೀ ಆರ್. ಎನ್. ನಾಗೇಂದ್ರ ರಾಯರು ದಿಗ್ದರ್ಶಿಸಿದ್ದ ಮಹತ್ವಾಕಾಂಕ್ಷೆಯ ಚಿತ್ರ ವಿಜಯನಗರದ ವೀರಪುತ್ರ ಚಿತ್ರದ ಕುದುರೆ ನಡಿಗೆಯ ತಾಳದ ಜನಪ್ರಿಯ ಗೀತೆ ಕೇಳಿದಾಗೆಲ್ಲ ಕರ್ನಾಟಕದಲ್ಲಿ ಶಿಲ್ಪಕಲೆಯು ಉನ್ನತ ಸ್ಥಾಯಿ ಮುಟ್ಟಿದ್ದ ಹೊಯ್ಸಳ ಅರಸರ ಕಲೆಯು ನೆನಪಿಗೆ ಬರುತ್ತದೆ.
ಡಿಸೆಂಬರ್ ೨೯ನೆ ತಾರೀಕು ಹಾಸನದಿಂದ ಮೈಸೂರಿಗೆ ಹೋಗಬೇಕಿತ್ತು..ಕರುನಾಡಿನ ಎಲ್ಲಾ ಸ್ಥಳಗಳು ಕೈ ರೇಖೆಯಂತೆ ಗುರುತು ಇಟ್ಟುಕೊಂಡಿರುವ "ನಿಮ್ಮೊಳಗೊಬ್ಬ ಬಾಲೂ" ಬ್ಲಾಗ್ ಖ್ಯಾತಿಯ ಬಾಲೂ ಸರ್ ಗೆ ಫೋನಾಯಿಸಿದೆ....ಚಕ ಚಕ ಅಂತ...ಒಂದು ಸಿದ್ಧ ಪ್ಲಾನ್ ಹೇಳಿಯೇ ಬಿಟ್ಟರು...ಚನ್ನರಾಯಪಟ್ಟಣ ಆದ ಮೇಲೆ ಬಲಕ್ಕೆ ತಿರುಗಿ ಕೆ.ಆರ್. ಪೇಟೆ ಕಡೆ ತಿರುಗಿಸಿರಿ...ಅಂತ...ಸರಿ ಗುರುಗಳ ಮಾರ್ಗದರ್ಶನದಲ್ಲಿ ಮುಂದುವರೆಯಿತು..ನಮ್ಮ ಗಾಡಿ.
ಕಿಕ್ಕೇರಿಗಿಂತ ಮುಂಚೆ ಕಾರನ್ನು ನಿಲ್ಲಿಸಿ ಮತ್ತೆ ಫೋನ್ ಹಚ್ಚಿದೆ..ಕುರುಡನಿಗೂ ದಾರಿ ಗೊತ್ತಾಗಬೇಕು..ಹಾಗೆ ಅಚ್ಚುಕಟ್ಟಾಗಿ ದಾರಿ ಹೇಳಿದರು. ಗೋವಿಂದನ ಹಳ್ಳಿ ಮಾರ್ಗದಲ್ಲಿ ಓಡಿತು ನಮ್ಮ ರಥ...ಸುಮಾರು ೩-೪ ಕಿ.ಮಿ. ಸಾಗುತ್ತ ಹಳ್ಳಿಯ ಸೊಬಗನ್ನು ಸವಿಯುತ್ತ, ಹೊಲ ಗದ್ದೆಗಳ ರಾಶಿ ರಾಶಿ ಜಮೀನನ್ನು ನೋಡುತ್ತಾ ನಿಧಾನವಾಗಿ ಸಾಗಿದೆ. ಬಲ ಭಾಗದಲ್ಲಿ ಒಂದು ಫಲಕ ಕಾಣಿಸಿತು...ಮತ್ತು ಪಂಚಲಿಂಗೇಶ್ವರ ದೇವಸ್ಥಾನಕ್ಕೆ ಎಡಗಡೆ ಎಂದು ಬಾಣದ ಗುರುತು ಇತ್ತು...
ಶ್ರೀ ಪಂಚಲಿಂಗೇಶ್ವರ ದೇವಸ್ಥಾನಕ್ಕೆ ದಾರಿ |
ಕಾಂಪೌಂಡ್ ನಿಂದ ಸುತ್ತುವರೆದು, ಹಸಿರು ಹುಲ್ಲು ಹಾಸಿನ ಮಧ್ಯೆ ಇದ್ದ ದೇವಾಲಯ ಸುಂದರವಾಗಿ ಕಂಡಿತು. ಸುಮಾರು ೧೨೩೦ರ ಆಸುಪಾಸಿನಲ್ಲಿ ನಿರ್ಮಾಣವಾದ ದೇವಾಲಯ ಸಹಜವಾಗಿಯೇ ಹೊಯ್ಸಳರ ಕಾಲದ ಶಿಲ್ಪಿಗಳ ಕೈ ಚಳಕವನ್ನು ಅನಾವರಣ ಮಾಡಿತ್ತು.
ಸುಂದರ ಆವರಣದೊಳಗೆ ಶಿಲ್ಪಿಗಳ ಕೈಚಳಕ |
ಮೋಡಗಳ ಪರದೆಯಲ್ಲಿ ದೇವಸ್ಥಾನ |
ರೈಲನ್ನು ನೆನಪಿಸುವಂತಹ ಸಾಲು ಸಾಲು ಕಂಬಗಳು |
ಮನಸಾರೆ ಚಿತ್ರಗಳನ್ನು ಸೆರೆಹಿಡಿದು ಅಲ್ಲಿಂದ ಹೊರಟೆವು, ಇನ್ನೊಂದು ಅದ್ಭುತ ಶಿಲ್ಪಕಲಾ ಗುಡಿಯ ಕಡೆಗೆ.
ಸುಂದರ ಆವರಣ! |
ಹೊಸಹೊಳಲಿನ ಶ್ರೀ ಲಕ್ಷ್ಮಿ ನರಸಿಂಹ ದೇವಾಸ್ಥಾನ |
ಸುಂದರ ಕೆತ್ತನೆಗಳ ಆವರಣ |
ಕ್ಯಾಮೆರಾದಲ್ಲಿ ಆದಷ್ಟು ತುಂಬಿಕೊಂಡು ಹೊರಗೆ ಬಂದೆ.
ಶಿಲ್ಪಿಗಳ ಕೈಚಳ ಅಮೋಘ! |
ಪ್ರತಿ ಸಾಲಿನಲ್ಲೂ ಶಿಲ್ಪಿಗಳ ನೈಪುಣ್ಯ ಎದ್ದು ಕಾಣುತ್ತದೆ |
ಹೊಯ್ಸಳ ಶಿಲ್ಪಕಲೆ ಎಂದರೆ ಬೇಲೂರು ಹಳೇಬೀಡು ಅಷ್ಟೇ ಅಲ್ಲ..ಇಂತಹ ಅನೇಕ ಅಮೋಘ ಕೆತ್ತನೆಗಳು ಹಾಸನ, ಮೈಸೂರು, ಮಂಡ್ಯ, ಚಿಕಮಗಳೂರು, ಭದ್ರಾವತಿ, ಶಿವಮೊಗ್ಗ, ಹರಿಹರ, ಹೀಗೆ ಅನೇಕ ಕಡೆ ಸಿಗುತ್ತದೆ. ಹೊಯ್ಸಳರಸರ ಕಾಲದ ಕೆತ್ತನೆ ಕಂಡು ಬರುವ ಇಲ್ಲಾ ದೇವಾಲಯಗಳನ್ನು ನೋಡುವ ತವಕ, ಉತ್ಸಾಹವಿದೆ. ಭಗವಂತನ ಅನುಗ್ರಹವಿದ್ದರೆ ಸಾಧ್ಯವಾಗುತ್ತದೆ ಎನ್ನುವ ಆಶಾಭಾವ ಹೊತ್ತು ದೇವಸ್ಥಾನದಿಂದ ಹೊರಟೆವು.
ಪ್ರತಿಮೆಗಳು, ಅಲಂಕಾರ ಒಂದಕ್ಕೊಂದು ವಿಭಿನ್ನ...ಸುಂದರ |